ಭಟ್ಕಳ: ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ, ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ತಾಲೂಕಿನ ಚಿತ್ರಾಪುರ ಬಡ್ಡುಕುಳಿ ನಿವಾಸಿ ಅಕ್ಷಯ ಮಂಜುನಾಥ ನಾಯ್ಕ (23) ಎಂದು ಗುರುತಿಸಲಾಗಿದೆ. ಶಾಲಾ ಬಾಲಕಿ ನಾಪತ್ತೆಯಾದ ಬಗ್ಗೆ ದೂರನ್ನು ಸ್ವೀಕರಿಸಿದ್ದ ಪೊಲೀಸರು, 48 ಗಂಟೆಗಳ ಒಳಗಾಗಿ ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಕರೆ ತಂದಿದ್ದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಪೊಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಟ್ಕಳ ಗ್ರಾಮೀಣ ಠಾಣಾ ಎಸೈ ಎಸೈ ಭರತ್ ತನಿಖೆ ಕೈಗೊಂಡಿದ್ದಾರೆ.
Leave a Comment