• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 by Devaraj Naik Leave a Comment

ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.

IMG 20210419 WA0059


ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ ಹೊಸನಗರದ ರಾಮಚಂದ್ರಾಪುರ ಮಠದವರು, ಈ ದೇವಸ್ಥಾನ ಪುರಾತನ ಕಾಲದಲ್ಲಿ ತಮ್ಮದಾಗಿತ್ತು. ಈಗ ಪುನಃ ಆಡಳಿತದ ನಿರ್ವಹಣೆಯನ್ನು ತಮಗೆ ವಹಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರಿಂದ, 2008ರ ಆ.14ರಂದು ಸೂಚಿತ ಪಟ್ಟಿಯಿಂದ ದೇವಾಲಯವನ್ನು ರದ್ದುಪಡಿಸಿ, ರಾಮಚಂದ್ರಾಪುರ ಮಠಕ್ಕೆ ಅಂದಿನ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಹಸ್ತಾಂತರ ಮಾಡಿತ್ತು. 

IMG 20210419 WA0060 1


ಇದನ್ನು ವಿರೋಧಿಸಿ ಬಾಲಚಂದ್ರ ದೀಕ್ಷಿತ್ ಹಾಗೂ ಇತರರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 10 ವರ್ಷಗಳ ವಿಚಾರಣೆಯ ಬಳಿಕ 2018ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠವು ರಾಮಚಂದ್ರಾಪುರ ಮಠದ ವಿರುದ್ಧ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದಲ್ಲಿ ದೇವಸ್ಥಾನದ ನಿರ್ವಹಣೆಯನ್ನು ನೋಡಿಕೊಳ್ಳಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. 


ಈ ತೀರ್ಪಿನ ವಿರುದ್ಧ ರಾಮಚಂದ್ರಾಪುರ ಮಠವು ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಹೀಗಿರುವಾಗ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದ್ದ ಕಾರಣ ಸರಕಾರ ದೇವಸ್ಥಾನವನ್ನು ಮತ್ತೆ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಆದರೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸಿಜೆಐ ಬೊಬ್ಡೆ ನೇತೃತ್ವದ ಪೀಠ, ಈಗ ಈ ಪ್ರಕರಣ ಸಂಬಂಧ ಮಧ್ಯಂತರ ವ್ಯವಸ್ಥೆ ಮಾಡುವ ಸಲುವಾಗಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಯನ್ನು ಮರು ರಚಿಸಿ, ಗೋಕರ್ಣ ಮಹಾಬಲೇಶ್ವರ ದೇವಾಲಯ ಆಡಳಿತದ ಉಸ್ತುವಾರಿಯನ್ನು ಸಮಿತಿಗೆ ವಹಿಸಿ ಆದೇಶಿಸಿದೆ.

Screenshot 20210419 155342 Chrome


ಆನುವಂಶೀಯ ಅರ್ಚಕರಿಂದ ಸಂಭ್ರಮಾಚರಣೆ
ಸುಪ್ರೀ‌ಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಗೋಕರ್ಣದ ಅನುವಂಶೀಯ ಅರ್ಚಕರು, ದೇಗುಲದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಸಾರ್ವಜನಿಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.
ಹಿಂದಿನ ಸರ್ಕಾರದ ನಡೆಯನ್ನು ತಪ್ಪು ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ರಾಮಚಂದ್ರಾಪುರ ಮಠವು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಇದಕ್ಕೆ ತಾತ್ಕಾಲಿಕ ತಡೆ ನೀಡಬೇಕು ಎಂದು‌ ಕೋರಿತ್ತು. ಆದರೆ ಈ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಇದು ಕೇವಲ ಗೋಕರ್ಣಕ್ಕಷ್ಟೇ ಅಲ್ಲ, ಇದು ನಾಡಿನ ಎಲ್ಲರಿಗೂ ಸಂದ ಜಯ ಎಂದು ಅನುವಂಶೀಯ ಅರ್ಚಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karwar News, Trending Tagged With: ದೇವಸ್ಥಾನ ಪುರಾತನ ಕಾಲ, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ, ಪಟಾಕಿ ಸಿಡಿಸಿ ಸಂಭ್ರಮಾಚರಣೆ, ಬಾಲಚಂದ್ರ ದೀಕ್ಷಿತ್ ಉಸ್ತುವಾರಿ, ಮುಜರಾಯಿ ಇಲಾಖೆಯ ಆಡಳಿತ, ರಾಮಚಂದ್ರಾಪುರ ಮಠ

Explore More:

About Devaraj Naik

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...