ಭಟ್ಕಳ: ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆಯೊರ್ವರಿಗೆ ಭಟ್ಕಳ ತಾಲೂಕಾಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಭಟ್ಕಳ ಪಟ್ಟಣದ ಚೌಥನಿಯ ನಿವಾಸಿಯಾದ ಗರ್ಭಿಣಿ ಮಹಿಳೆಯೊರ್ವರಿಗೆ ತಪಾಸಣೆ ನಡೆಸಿದ್ದು ಕೋವಿಡ್ ಸೋಂಕು ಪತ್ತೆಯಾಗಿತ್ತು. ಮಹಿಳೆ ಪರಿಸ್ಥಿತಿ ಗಂಭೀರವಾಗಿದ್ದು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದು ಅನಿವಾರ್ಯವಾಗಿತ್ತು. ಇದನ್ನು ಅರಿತ ಡಾ. ಶಮ್ಸನೂರ್ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.
ಡಾ. ಸವಿತಾ ಕಾಮತ ಅರವಳಿಕೆ ನೀಡಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದಾರೆ. ಈ ಸಂದರ್ಭದಲ್ಲಿ ಶ್ರುಶೂಶಕಿಯರಾದ ರೇಖಾ ಮತ್ತು ಶಶಿಕಲಾ ಸಹಕರಿಸಿದ್ದರು.
Leave a Comment