ಹೊನ್ನಾವರ; ತಾಲೂಕಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ತಹಶೀಲ್ದಾರ ವಿವೇಕ ಶೇಣ್ವಿ ತಿಳಿಸಿದ್ದಾರೆ. ರವಿವಾರ ಸಾಯಂಕಾಲದಿಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅನಾವಶ್ಯಕ ತಿರುಗಾಡುವವರ ಮೇಲೆ ಪೋಲಿಸ್ ಇಲಾಖೆ ನಿಗಾ ಇಡಲಾಗಿದೆ.

ಪಟ್ಟಣ ವ್ಯಾಪ್ತಿಯಲ್ಲಿ ಕಿರಾಣಿ, ತರಕಾರಿ, ಹಣ್ಣುಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಸಹಾಯವಾಣಿ ಆರಂಭಿಸಿದ್ದು, ಕುಂದುಕೊರತೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ತಾಲೂಕಿನ ಕಲ್ಯಾಣ ಮಂಟಪದಲ್ಲಿ ಸರ್ಕಾರದ ಆದೇಶದಂತೆ ಮದುವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲು ನಿರ್ಬಂದಿಸಲಾಗಿದೆ. ಮನೆ ಹಾಗೂ ವಿಶಾಲ ಪ್ರದೇಶದಲ್ಲಿ ಗರಿಷ್ಟ ೪೦ ಜನರು ಭಾಗವಹಿಸಲು ಷರತ್ತುಬದ್ದ ಅನುಮತಿ ನೀಡಲಾಗಿದೆ. ಇದನ್ನು ಮೀರುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಎಲ್ಲಾ ಸಭಾಭವನದ ಉಸ್ತುವಾರಿಗಳಿಗೆ ಸಂಭದಿಸಿದ ಆದೇಶದ ಪ್ರತಿಯನ್ನು ರವಾನಿಸಲಾಗಿದೆ ಎಂದು ತಹಶೀಲ್ದಾರ ವಿವೇಕ ಶೇಣ್ವಿ ಮಾಹಿತಿ ನೀಡಿದ್ದಾರೆ.
Leave a Comment