ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಭೇಟಿ ನೀಡಿ, ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಕೈಗೊಂಡ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ನಂತರ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿ ಯಾವುದೇ ಅಡೆತಡೆ ಆಗದಂತೆ ನೋಡಿಕೊಳ್ಳುವಂತೆ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.
ಸಚಿವರ ಸೂಚನೆಯ ಮೇರೆಗೆ ಬೆಂಗಳೂರಿನ ಕಾರ್ಮಿಕ ವಿಮಾ ಆಸ್ಪತ್ರೆಯನ್ನು ಸುಮಾರು 300 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ರಾಜ್ಯ ಕಾರ್ಮಿಕ ವಿಮಾ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Leave a Comment