ಮುಂಡಗೋಡ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ” ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ ನೀಡಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ನಂತರ, ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಒದಗಿಸಿದ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 2 ಅಂಬುಲೆನ್ಸ್ ಗಳನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಮೂಲಕವಾಗಿ ಮುಂಡಗೋಡ ತಾಲೂಕಾ ಆಸ್ಪತ್ರೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್. ಪಾಟೀಲ್ ಹಾಗೂ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್ ಹಾಗೂ ಜಿಲ್ಲಾಧಿಕಾರಿ ಎಂ.ಪಿ. ಮುಲೈ ಮುಹಿಲನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಹಾಗೂ ತಾಲೂಕಾ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment