ಯಲ್ಲಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೇವಾ ಕಾರ್ಯಗಳನ್ನು ಆಚರಿಸಲಾಗುತ್ತಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ನಂದೊಳ್ಳಿ ಹಾಗೂ ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ” ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ಅನ್ನು ವಿತರಿಸಿ, ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.

ನಂತರ ಚಂದಗುಳಿ ಘಟಕದ ವತಿಯಿಂದ ಆಯೋಜಿಸಿದ್ದ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಮಾನ್ಯ ಸಚಿವರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ ಯಲ್ಲಾಪುರಕರ್, ನಂದೊಳ್ಳಿ ಪಂಚಾಯತ ಅಧ್ಯಕ್ಷರಾದ ನರಸಿಂಹ ಕೋಣೆಮನೆ, ತಾಲೂಕಾ ಪಂಚಾಯತ ಮಾಜಿ ಸದಸ್ಯರಾದ ನಾಗರಾಜ ಕವಡಿಕೇರಿ ಹಾಗೂ ಚಂದಗುಳಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Leave a Comment