• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೇಂದ್ರ ಸರ್ಕಾರಕ್ಕೆ ಎರಡು ವರ್ಷ; ಬಿಜೆಪಿಗರಿಂದ ಆಹಾರ ಕಿಟ್ ವಿತರಣೆ

June 2, 2021 by Vishwanath Shetty Leave a Comment

ಕೇಂದ್ರದಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ  ಸರ್ಕಾರ, ಎರಡನೇ ಅವಧಿಯಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷ ಯಶ್ವಸಿಯಾಗಿ ಸಂಪನ್ನಗೊಂಡ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ, ಉತ್ತರಕನ್ನಡ ಜಿಲ್ಲೆಯ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ ರವರು ಹೊನ್ನಾವರ ತಾಲೂಕಿನ ಸಾಲ್ಕೋಡ್ ಹಾಗೂ ಕಡ್ಲೆ ಪಂಚಾಯತ ವ್ಯಾಪ್ತಿಯಲ್ಲಿ  ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ, ಸ್ಯಾನಿಟೈಸರ ಹಾಗೂ ಆಹಾರ ಕಿಟ್ ವಿತರಿಸಿದರು.

IMG 20210601 WA0053


ಈ ಸಂದರ್ಭದಲ್ಲಿ ಅವರು ಮಾತನಾಡಿ ಕೇಂದ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ನರೇಂದ್ರ ಮೋದಿಯವರ ನಾಯಕತ್ವದ ಸರ್ಕಾರ ಎರಡನೇ ಅವಧಿಯಲ್ಲಿ ಎರಡು ವರ್ಷ ಸಂಪನ್ನಗಳಿಸಿದ  ನಮಗೆ ಒಂದು ವಿಶೇಷವಾದ ದಿನವಾಗಿದೆ. ಎರಡನೇ ಅವಧಿಯಲ್ಲಿ ಎರಡು ವರ್ಷ ಆಡಳಿತವನ್ನು ಬಹಳ ಅಚ್ಚುಕಟ್ಟಾಗಿ ಪೂರೈಸಿದೆ ಎಂಬ ವಿಷಯ ಭಾರತೀಯ ಜನತಾ ಪಾರ್ಟಿಯ ಪ್ರತಿಯೊಬ್ಬ ಕಾರ್ಯಕರ್ತರ ಮನದಾಳದ ಮಾತಾಗಿದೆ.2014 ರ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅಧಿಕಾರ ಸ್ವೀಕರಿಸಿದ ನಂತರ  7 ವರ್ಷ ಕಳೆದಿದೆ, ಸಹಜವಾದ ಸಂದರ್ಭ ಆಗಿದ್ದರೇ ನಮ್ಮ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಬೇಟಿ ನೀಡಿ ಸರ್ಕಾರದ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತಿತ್ತು. ಕಳೆದ ವರ್ಷ ವಿಶ್ವದಾದ್ಯಂತ ಪಸರಿಸಿದ ಕೋವಿಡ್-19 ನಂತಹ ಮಹಾಮಾರಿಯ ರೋಗದ ಸಂದರ್ಭದಲ್ಲಿ ನಮ್ಮ ದೇಶದ ನಾಗರಿಕರ ರಕ್ಷಣೆಗಾಗಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಆಡಳಿತ ನಡೆಸಿದೆ ಎಂಬ ಹೆಮ್ಮೆ ಪಡುವ ನಮಗೆ, ಸಂಭ್ರಮಿಸುವ ವಿಷಯವಾದರೂ ಸಂಭ್ರಮಪಡುವ ಸಮಯವಲ್ಲಾ, ಏಕೆಂದರೆ ಕಳೆದ ವರ್ಷ ಜಗತ್ತಿಗೆ ಪಸರಿಸಿದ ಕೋವಿಡ್-19 ಎಂಬ ಮಹಾಮಾರಿಯನ್ನು ತಡೆಯಲು ಜಗತ್ತಿನ ಮುಂದುವರಿದ ದೇಶಗಳಾದ ಅಮೇರಿಕಾ ಆಗಲಿ, ವೈದ್ಯಕೀಯ ವ್ಯವಸ್ಥೆಯಲ್ಲಿ ಅತ್ಯಂತ ಬಲಿಷ್ಠವಾದ ಯೂರೋಪಿನ ರಾಪ್ಟ್ರಗಳಾಗಬಹುದು ಕೊರೋನಾ ರೋಗವನ್ನು ನಿಯಂತ್ರಿಸುವಲ್ಲಿ ಹೆಣಗಾಡುವ ಸಂದರ್ಭದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನತೆಯ ರಕ್ಷಣೆಮಾಡುವಲ್ಲಿ ಬಹಳ ಉತ್ತಮ ಆಡಳಿತ ನೀಡಿದ್ದಾರೆ ಎಂಬುದು ಜನರ ಅಭಿಪ್ರಾಯವಾಗಿದೆ.
ಇಂತಹ ಸಂದರ್ಭದಲ್ಲಿ ನಾವು ಭಾರತೀಯ ಜನತಾ ಪಾರ್ಟಿಯ ಮೂಲಕ ಈ ದಿನವನ್ನು ಪಂಚಾಯತ ವ್ಯಾಪ್ತಿಯ, ಬೂತ್ ಮಟ್ಟದಲ್ಲಿ ಹಲವು ರೀತಿಯ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದೇವೆ, ಅವುಗಳಲ್ಲಿ ಮುಖ್ಯವಾಗಿ ಕೊರೋನಾ ವಾರಿಯರ್ಸಗಳಿಗೆ ಗೌರವ ಸಲ್ಲಿಸುವುದು, ಕೋವಿಡ್-19 ತಗುಲಿ ಮೃತ ಪಟ್ಟವರ ಕುಟುಂಬಗಳಿಗೆ ಬೇಟಿ ನೀಡಿ ಸಾಂತ್ವನ ಹೇಳುವುದು, ಆಹಾರ ಕಿಟ್ ನೀಡುವುದು, ನಗರಗಳಲ್ಲಿ ಹಾಗೂ ಹಳ್ಳಿಗಳಲ್ಲಿ ಗಿಡ ನೆಡುವ ಕಾರ್ಯ, ಮಾಸ್ಕ ವಿತರಣೆ, ಕಷಾಯ ಕುಡಿಯುವ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಹೀಗೆ ಹಲವು ರೀತಿಯ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.ಈ ಸಂದರ್ಬದಲ್ಲಿ ಜಿಲ್ಲಾ ಬಿಜಪಿ ಕಾರ್ಯದರ್ಶಿ ಎನ್.ಎಸ್.ಹೆಗಡೆ, ಮಂಡಲಧ್ಯಕ್ಷ ರಾಜೇಶ ಭಂಡಾರಿ, ಮಂಡಲ ಪ್ರಭಾರಿ ಶಿವಾನಿ ಶಾಂತರಾಮ, ಮುಗ್ವಾ ಶಕ್ತಿ ಕೇಂದ್ರದ ಅಧ್ಯಕ್ಷ ರವಿ ಹೆಗಡೆ,  ರೈತ ಮೊರ್ಚಾ ಅಧ್ಯಕ್ಷ ಎನ್.ಎಸ್.ಹೆಗಡೆ ಹಾಜರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಆಶಾ ಕಾರ್ಯಕರ್ತರು, ದೇಶದ ಸಮಗ್ರ ಅಭಿವೃದ್ಧಿ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ, ಭಾರತೀಯ ಜನತಾ ಪಾರ್ಟಿ, ಸಾಲ್ಕೋಡ್ ಹಾಗೂ ಕಡ್ಲೆ ಪಂಚಾಯತ ವ್ಯಾಪ್ತಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,232 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...