ಯಲ್ಲಾಪುರ : ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕಾ ಯುವಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ್ದ ” ಸಸಿ ನೆಡುವ ” ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಎ.ಪಿ. ಎಮ್.ಸಿ ಬಳಿ ಹಾಗೂ ಮಂಚಿಕೇರಿಯಲ್ಲಿ ಗಿಡ ನೆಡುವ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ ಹಾಗೂ ಮಂಡಲಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಜಿ ಗಾಂವ್ಕರ್, ಯುವಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರದೀಪ ಯಲ್ಲಾಪುರ ಹಾಗೂ ಮಂಡಳದ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ ಹಾಗೂ ಪಕ್ಷದ ವಿವಿಧಸ್ತರದ ಮೋರ್ಚಾದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.


Leave a Comment