ಹೊನ್ನಾವರ: ಕೊರೋನಾ ಸಮಯದಲ್ಲಿ ಜೀವದ ಹಂಗು ತೊರೆದು ಮನೆಮನೆಗೆ ತೆರಳಿ ಆರೊಗ್ಯ ವಿಚಾರಿಸುವ ವಾರಿಯರ್ಸ ಆಗಿರುವ ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ನೀಡುವ ಮೂಲಕ ಗ್ರಾಮ ಪಂಚಾಯತಿ ಗೌರವಿಸಿದೆ.

ಈ ಸಂದರ್ಭದಲ್ಲಿ ಅಧ್ಯಕ್ಷೆ ರಜನಿ ನಾಯ್ಕ, ಉಪಾಧ್ಯಕ್ಷ ಸಚೀನ ನಾಯ್ಕ, ಅಭಿವೃದ್ಧಿ ಅಧಿಕಾರಿ ವಿ.ಎ.ಪಟಗಾರ, ಸದಸ್ಯರಾದ ಬಾಲಚಂದ್ರ ನಾಯ್ಕ, ಆಶಾ ಮಡಿವಾಳ , ಆರೊಗ್ಯ ನಿರೀಕ್ಷಕ ಚಿದಾನಂದ ಹಾಗೂ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
Leave a Comment