• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿಯನ್ನು ಕೋವಿಡ್ ಮುಕ್ತ ಮಾಡಲು ಕ್ರಮ ವಹಿಸಲಾಗಿದೆ:ಭಟ್ಕಳದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿಕೆ

June 10, 2021 by bkl news Leave a Comment

ಭಟ್ಕಳ: ಕಳೇದ ವಾರ 13 ರಷ್ಟಿದ್ದ ಫಾಸಿಟಿವ್ ದರ ಇಂದು 6ಕ್ಕೆ ಇಳಿದಿದೆ‌. ಜಿಲ್ಲೆಯಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದು, ಪ್ರತಿ ಗ್ರಾಮ ಪಂಚಾಯ್ತಿಯನ್ನು ಕೋವಿಡ್ ಮುಕ್ತ ಮಾಡಲು ಕ್ರಮ ವಹಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭುಡವಾರ ಸಂಜೆ ಹೇಳಿದರು .

Screenshot 20210610 213344 WhatsApp


ಜಿಲ್ಲೆಯಲ್ಲಿ ಅರಂಭದಲ್ಲಿಯೇ ಬೆಂಗಳೂರಿನಿಂದ ಬಂದಂತಹ ಕುಟುಂಬಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆಗೊಳಪಡಿಸಿದ ಕಾರಣ ಹೆಚ್ಚು ಕೇಸ್ ದಾಖಲಾಗಲಿಲ್ಲ. ಅದರೆ ಪರೀಕ್ಷೆ  ವರದಿ ಬರಲು ತಡವಾದ ಕಾರಣ ಫಾಸಿಟಿವ್ ದರ ಹೆಚ್ಚಾಯಿತು. ಅದರೆ ಕೇಸ್ ಜಾಸ್ತಿ ಇರದ  ಕಾರಣ ಬೇರೆ ಜಿಲ್ಲೆಯ ರೀತಿಯಲ್ಲಿ ನಮಗೆ ಹಾಸಿಗೆ, ಆಮ್ಲಜನಕಗಳ ಕೊರತೆ ಅಗಲಿಲ್ಲ ಎಂದ ಅವರು ಜಿಲ್ಲೆಯಲ್ಕಿ ಪ್ರತಿ ಗ್ರಾಮ ಪಂಚಾಯ್ತಿ ಕೋವಿಡ್ ಮುಕ್ತ ಮಾಡಲು ಮಾರ್ಗದರ್ಶನ ನೀಡಲಾಗಿದೆ. ನಾವು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಗಬೇಕಾದ ಕೆಲಸಗಳ ಬಗ್ಗೆ ಸೂಚನೆ ನೀಡಿದ್ದೇವೆ. ಜಿಲ್ಲೆಯಲ್ಲಿ ಫಾಸಿಟಿವ್ ದರ ಇಳಿಮುಖವಾಗಿದೆ ಎಂದು ಜನರು ನಿರ್ಲಕ್ಷ್ಯ ಮಾಡುವುದು ಬೇಡಾ. ಸೋಂಕಿನ ಲಕ್ಷಣ ಇದ್ದರೆ ತಪಾಷಣೆ ಮಾಡಿಸಿಕೊಳ್ಳಿ ಎಂದರು. 

ಕೋವಿಡ್  ಪರೀಕ್ಷೆಗಾಗಿ ಹೆಚ್ಚುವರಿ ಘಟಕವನ್ನು ಶಿರಸಿಯಲ್ಕಿ ಸ್ಥಾಪನೆ ಮಾಡಲಾಗಿದೆ ಎಂದರು. ಭಟ್ಕಳದಲ್ಲಿ ಲಸಿಕೆ ನೀಡಲು ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅದ್ಯತೆಯ ಮೇರೆಗೆ ಹಂತಹಂತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು. ಮೊದಲನೇ ಲಸಿಕೆ‌ ಪಡೆದ ಸಾರ್ವಜನಿಕರು ಅವಧಿ ಮುಗಿದರೂ 2ನೇ ಲಸಿಕೆ ತೆಗೆದುಕೊಳ್ಳಲು ಮುಂದೆ ಬರದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು ಯಾರು ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೇ 2 ನೇ ಲಸಿಕೆ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದರು. 


ಮಳೆಗಾಲಕ್ಕೆ ಸಿದ್ದತೆ : ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಉಂಟಾಗುವ ಪ್ರಕೃತಿ ವಿಕೋಪಗಳಿಗೆ ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿಕೊಂಡಿದೆ.‌ ಮಳೆಗಾಲದಲ್ಲಿ ಅತೀವೃಷ್ಠಿಗೆ ತುತ್ತಾಗುವ ಗುಂಡಬಾಳ, ಹಡೀನಬಾಳ, ಚಿಕ್ಕನಕೇರಿ ಪ್ರದೇಶಗಳಿಗೆ ಭೇಟಿ ನೀಡಿ ಮುಂಜಾಗ್ರತ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ವಹಿಸಬೇಕಾದ ಮುಂಜಾಗ್ರತೆಗಳ ಕೆಲಸಗಳ ಬಗ್ಗೆ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆ ನಡೆಸಿ ಸೂಚಿಸಲಾಗಿದೆ ಎಂದರು. ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆಗಳನ್ನು ಅಯಾ ಗ್ರಾಮಪಂಚಾಯ್ತಿ ಮಟ್ಟದಲ್ಲಿ ತಕ್ಷಣ ಸ್ಪಂದಿಸುವ ತಂಡವನ್ನು ರಚನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಭಟ್ಕಳ ಶಾಸಕ ಸುನೀಲ‌ ನಾಯ್ಕ, ಉಪವಿಭಾಗಾಧಿಕಾರಿ ಮಮತಾ ದೇವಿ, ತಹಶೀಲ್ದಾರ ರವಿಚಂದ್ರ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಕೋವಿಡ್ ಪರೀಕ್ಷೆ, ಭಟ್ಕಳದಲ್ಲಿ ಲಸಿಕೆ, ಮಳೆಗಾಲದಲ್ಲಿ ಅತೀವೃಷ್ಠಿ, ಮಳೆಗಾಲದಲ್ಲಿ ಉಂಟಾಗುವ ಪ್ರಕೃತಿ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,129 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...