ಹೊನ್ನಾವರ: ಕೋರೊನಾದಿಂದ ದೇಶ ಕಂಗೆಟ್ಟ ಸಂದರ್ಭದಲ್ಲೂ ದಿನ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ನೂಕುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರದ ವಿರುದ್ಧ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. (12/06/2021) ಶನಿವಾರ ಮುಂಜಾನೆ 11-00 ಗಂಟೆಗೆ ನಗರದ ಮಿನಿ ವಿಧಾನ ಸೌಧ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್ ಎದುರು ಸಾರ್ವಜನಿಕವಾಗಿ ಪ್ರತಿಭಟಿಸಲಾಗುವುದು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ, ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Leave a Comment