ಕಾರವಾರ :- ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿ ಗ್ರಾಮದ ಹೆಮ್ಮೆಯ ಕುವರಿ. ದಿಶಾ ಭಾಗ್ವತ್ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದಿರುವ ಕಾರ್ಮಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರು ದಿಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಮಹತ್ತರ ಸಾಧನೆ ಮಾಡಿರುವ ದಿಶಾ ಭಾಗ್ವತ್ ಅವರ ಪರಿಶ್ರಮ, ಶ್ರದ್ಧೆ ಹಾಗೂ ಸಾಧಿಸಬೇಕು ಎನ್ನುವ ಹಂಬಲವು ಇಂದಿನ ಯುವ ಪೀಳಿಗೆ ಒಂದು ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ದಿಶಾ ಭಾಗ್ವತ್ ಇವರು ಇನ್ನೂ ಹೆಚ್ಚಿನ ಸಾಧನೆ ಮಾಡುವುದರ ಮೂಲಕವಾಗಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
Leave a Comment