ಯಲ್ಲಾಪುರ : ‘ಕೋವಿಡ್ ಕಾರಣದಿಂದ ಜನರು ಮನೆಯಲ್ಲಿ ಕುಳಿತರೂ ಅವರ ಸುರಕ್ಷತೆಯ ದೃಷ್ಠಿಯಿಂದ ಮನೆಯಿಂದ ಹೊರಗೆ ಕಾರ್ಯ ನಿರ್ವಹಿಸುತ್ತಿರುವವರನ್ನು ಗುರುತಿಸಿ ಅವರ ಸುರಕ್ಷಿತವಾಗರಬೇಕೆಂದು ಅವರಿಗೆ ಸುರಕ್ಷಾ ಕಿಟ್ ನೀಡುವ ಕಾರ್ಯವನ್ನು ಬಿಜೆಪಿ ಯುವ ಮೋರ್ಚಾ ಮಾಡುತ್ತಿದೆ’ ಎಂದು ಬಿಜೆಪಿ ಯುವ ಮೋರ್ಚಾರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಹೇಳಿದರು.
ತಾಲ್ಲೂಕು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ಸ್ಟೀಮರ್ ಸೇರಿದಂತೆ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.
ಬಿಜೆಪಿ ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಶಾಂತ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ಮೇಲ್ಪಂಕ್ತಿ ಕಾರ್ಯಕರ್ತರಾದವರಿಗೆ 18 ಸಾವಿರಕ್ಕೂ ಹೆಚ್ಚು ಮಾತ್ರೆಗಳು, 25 ಸಾವಿರಕ್ಕೂ ಹೆಚ್ಚು ಮಾಸ್ಕ್ ಗಳು, ಪತ್ರಕರ್ತರಿಗೆ ಸ್ಟೀಮರ್ ಗಳನ್ನು ನೀಡುತ್ತಿದ್ದೇವೆ ಎಂದರು.
ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ಮದ್ಗುಣಿ ಮಾತನಾಡಿ, ಮಾಧ್ಯಮದವರ ಸೇವೆಯನ್ನು ಗುರುತಿಸಿ ಅವರ ಸುರಕ್ಷೆಯ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಸಂಘದ ಪರವಾಗಿ ಕೃತಜ್ಞತೆ ಅರ್ಪಿಸಿದರು.
ಮಂಡಲಾಧ್ಯಕ್ಷ ಗೋಪಾಕೃಷ್ಣ ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಯುವಮೋರ್ಚಾ ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಸ್ವಾಗತಿಸಿ, ನಿರೂಪಿಸಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಸೋಮೇಶ್ವರ ನಾಯ್ಕ, ಪ್ರಧಾನ ಕಾರ್ಯದರ್ಶಿ ವಿಶಾಲ ಮರಾಟೆ, ರಘುಪತಿ ಹೆಗಡೆ ಮುಂತಾದವರಿದ್ದರು.
Leave a Comment