• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ

June 13, 2021 by Sachin Hegde Leave a Comment

ಗುಜರಾತಿನ ಕಲೋಲ್’ನಲ್ಲಿರುವ ಇಫ್ಕೋ ನ್ಯಾನೋ ಯುರೀಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿತು.
ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ ದೇಶದಲ್ಲಿ ಈಗಾಗಲೇ 3 ಕಡೆ ನ್ಯಾನೋ ಯೂರಿಯಾ ಘಟಕ ಸ್ಥಾಪಿಸಿದ್ದು ಇನ್ನೂ ನಾಲ್ಕು ಕಡೆ ಹೊಸ ಘಟಕಗಳನ್ನು ತೆರೆಯಲಿದೆ. ಇಫ್ಕೋ ಈ ಹಂಗಾಮಿನಲ್ಲಿ 28 ಕೋಟಿ ಬಾಟಲಿ (500 ಎಂಎಲ್) ನ್ಯಾನೋ ಯೂರಿಯಾ ಉತ್ಪಾದಿಸಲಿದೆ.

nano urea


ಬೆಂಗಳೂರಿನಲ್ಲಿ ಸಾಯಂಕಾಲ ವರ್ಚ್ವಲ್ ಸಭೆ ಮೂಲಕ ಕಲೋಲ್’ನಿಂದ ಹೊರಟ ನ್ಯಾನೋ ಯೂರಿಯಾ ವಾಹನಕ್ಕೆ ಹಸಿರು ನಿಶಾನೆ ತೋರಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಜಗತ್ತಿನಲ್ಲಿಯೇ ಪ್ರಪ್ರಥಮವಾಗಿ ನ್ಯಾನೋ ಯೂರಿಯಾ ಅಭಿವೃದ್ಧಿಪಡಿಸಿರುವ ಇಫ್ಕೋ ಕಂಪನಿಯನ್ನು ಅಭಿನಂದಿಸಿದರು.

ಕರ್ನಾಟಕದಲ್ಲಿಯೂ ನ್ಯಾನೋ ಯೂರಿಯಾ ಕಾರ್ಖಾನೆ ಸ್ಥಾಪಿಸಲು ಇಫ್ಕೋ ಆಸಕ್ತಿ ತೋರಿದ್ದು ಇನ್ನು 10 ದಿನದೊಳಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಸೂಕ್ತವಾಗದ ಜಾಗವನ್ನು ಗುರುತಿಸಲಾಗುವುದು ಎಂದು ಕೇಂದ್ರ ಸಚಿವ ಸದಾನಂದ ಗೌಡ ಪ್ರಕಟಿಸಿದರು.

ನ್ಯಾನೋಗೊಬ್ಬರ ರೈತರಿಗೆ ವರವಾಗಲಿದೆ. ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತದೆ ಉಳಿಸಿಕೊಳ್ಳಲು ಸಹಾಯಕವಾಗಲಿದೆ. ಒಂದೆಡೆ ಶೇಕಡಾ 8ರಿಂದ 15ರಷ್ಟು ಖರ್ಚು ಕಡಿಮೆಯಾಗಲಿದೆ. ಇನ್ನೊಂದೆಡೆ ಇಳುವರಿಯು 15ರಿಂದ 20 ಪ್ರತಿಶತ ಹೆಚ್ಚಾಗಲಿದೆ. ಇದರಿಂದ ದೇಶದ ರೈತರಿಗೆ ಈ ಸಲ ಸುಮಾರು 28 ಸಾವಿರ ಕೋಟಿ ಹೆಚ್ಚುವರಿ ಆದಾಯ ದೊರೆಯುವುದು ಎಂದು ಅಂದಾಜಿಸಲಾಗಿದೆ ಎಂದರು.

Nano UreaDV Sadananda Gowda


ದೇಶದಲ್ಲಿ ಪ್ರತಿವರ್ಷ ಸರಾಸರಿ 330 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬಳಕೆಯಾಗುತ್ತದೆ. ಇದರಲ್ಲಿ ಸುಮಾರು 90 ಲಕ್ಷ ಟನ್ ಆಮದು ಮಾಡಿಕೊಳ್ಳುತ್ತೇವೆ. ನ್ಯಾನೋ ಯೂರಿಯಾ ಪ್ರವೇಶದಿಂದಾಗಿ ಈ ಸಲ ಮಾಮೂಲಿ ಯೂರಿಯಾ ಬಳಕೆಯಲ್ಲಿ ಶೇಕಡಾ 20ರಷ್ಟು ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಸುಮಾರು 16,000 ಕೋಟಿ ರೂ ಯೂರಿಯಾ ಸಬ್ಸಿಡಿ ಉಳಿತಾಯವಾಗಬಹುದು ಎಂದು ಲೆಕ್ಕಹಾಕಲಾಗಿದೆ. ಇನ್ನು ಕರ್ನಾಟದಲ್ಲಿ, ನ್ಯಾನೋ ಯುರಿಯಾ ಬಂದಿರುವುದರಿಂದ ಮಾಮೂಲಿ ಯೂರಿಯಾ ಬಳಕೆ ಸುಮಾರು 5 ಲಕ್ಷ ಟನ್ ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ ಎಂದರು.


ನಾಯಕತ್ವ ಬದಲಾವಣೆ ಇಲ್ಲ:
ನಂತರ ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಉಸ್ತುವಾರಿ ಇರ್ತಾರೆ. ಕೇಂದ್ರದ ವರಿಷ್ಠರ ಸಂದೇಶವನ್ನು ಅವರು ನೀಡ್ತಾರೆ. ಹಾಗೆಯೇ ನಮ್ಮ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು – ಮುಂದಿನ ಎರಡು ವರ್ಷಗಳು ಕೂಡ ಬಿಎಸ್​​ವೈ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಪೆಟ್ರೋಲ್ ದರ ಏರಿಕೆ ವಿಚಾರವಾಗಿ ಕೇಳಲಾದ ಪ್ರಶ್ನಗೆ ಪ್ರತಿಕ್ರಿಯಿಸಿದ ಸದಾನಂದ ಗೌಡರು – ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟ ಮೇಲೆ ಅವಲಂಬಿಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಅದರ ಮೇಲೆ ವಿವಿಧ ರೀತಿ ತೆರಿಗೆ ವಿಧಿಸಿಸುತ್ತದೆ. ಇದನ್ನು ಜಿಎಸ್​​ಟಿ ವ್ಯಾಪ್ತಿಗೆ ತರುವುದು ಸೂಕ್ತ ಎಂಬುದು ನನ್ನ ಭಾವನೆ. ಆದರೆ ಜಿಎಸ್​​ಟಿ ಸ್ವಾಯತ್ತ ಸಂಸ್ಥೆ ಆಗಿದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳ ವಿತ್ತ ಸಚಿವರು ಅದರಲ್ಲಿ ಇರುತ್ತಾರೆ. ಅವರು ಅದನ್ನು ನಿರ್ಧರಿಸಬೇಕು ಎಂದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karnataka News, Trending, ಕೃಷಿ Tagged With: DV Sadananda Gowda, Environmental Friendly, Minister of State for Chemicals and Fertilizers, Nano Urea, New Revolution in Agriculture, Soil Fertilizer Minister, ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ, ಕೇಂದ್ರ ರಾಸಾಯನಿಕ, ನ್ಯಾನೋ ಯೂರಿಯಾ, ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತದೆ ಉಳಿಸಿಕೊಳ್ಳಲು ಸಹಾಯಕ, ಬೆಲೆ ಒಂದು ಬಾಟಲಿಗೆ 240 ರೂಪಾಯಿ, ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ, ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...