ಭಟ್ಕಳ: ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಸಮೀಪ ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ
ಹೊನ್ನಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದು ತಾಲ್ಲೂಕಿನ ಪುರ ವರ್ಗದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು.
ಡಿಕ್ಕಿಯ ರಭಸಕ್ಕೆ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು. ಆಟೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ
ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಆಟೋ ಚಾಲಕ ಸತೀಶ ದೇವಾಡಿಗ ಕುಂದಾಪುರ ಮೂಲದ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
Leave a Comment