ಹೊನ್ನಾವರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಆಯ್ ಸಿ ಟಿ ಸ್ಮಾರ್ಟಕ್ಲಾಸ್ ರೂಮ್ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಲೇಟ್‌ಪಿಸಿ ವಿತರಣಾ ಕಾರ್ಯಕ್ರಮವನ್ನು ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.

ಕೋರೋನಾ ಹಿನ್ನಲೆಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿ ಮಾತನಾಡಿದ ಅವರು ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಕಲ್ಪಸಿದ್ದರು ಗ್ರಾಮೀಣ ಭಾಗದಲ್ಲಿ ನೆಟವರ್ಕ ಸಮಸ್ಯೆಗಳಿಂದ ಪ್ರಯೋಜನಕ್ಕೆ ಬಾರದಂತಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಸರ್ಕಾರ ಆರ್ಥಿಕವಾಗಿ ತುಂಬಾ ಬಿಕ್ಕಟ್ಟು ಎದರಿಸುತ್ತಿದ್ದರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ ಒಂದು ಲಕ್ಷ ೫೫ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುತ್ತಿದೆ ಎಂದರು.
ಕಾಲೇಜಿಗೆ ಉತ್ತಮ ಕಟ್ಟಡವನ್ನು ಹೊಂದಿದ ತಾಲೂಕಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಶೈಕ್ಷಣಿಕವಾಗಿ ಸಾಧನೆ ಮಾಡುವಂತೆ ಸಲಹೆ ನೀಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ.ಪಂಚಾಯತಿ ಸದಸ್ಯೆ ಶ್ರೀಕಲಾ ಶಾಸ್ತ್ರೀ ಮಾತನಾಡಿ ವಿದ್ಯಾರ್ಥಿಗಳಿಗೆ ನೆಟವರ್ಕ ಸಮಸ್ಯೆ ತುಂಬಾ ಇದ್ದು ಬೇರೆ ಜಿಲ್ಲೆಗಳಲ್ಲಿ ಈಗಾಗಲೇ ಜಿಲ್ಲಾ ಉಸ್ತುವಾರಿಸಚಿವರು ಹಾಗೂ ಶಾಸಕರ ವಿಶೇಷ ಪ್ರಯತ್ನದಿಂದ ಸಮಸ್ಯೆ ಬಗೆಹರಿದೆ.

ನಮ್ಮ ಜಿಲ್ಲೆಯಲ್ಲು ಆದಷ್ಟು ಬೇಗನೆ ಸಮಸ್ಯೆ ಬಗೆಹರಿಯುವಂತಾಗಲಿ ಎಂದು ಶಾಸಕರಲ್ಲಿ ವಿನಂತಿಸಿದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಡಾ. ಸುಮಂಗಲಾ ಬಿ ನಾಯಕ ,ಸಿಡಿಸಿ ಸದಸ್ಯರಾದ ಎಂ ಎಸ್ ಹೆಗಡೆ. ದತ್ತು ಮೇಸ್ತ, ಸುರೇಶ ಸಾರಂಗ,ಕಮಲಾ ನಾಯ್ಕ ಉಪಸ್ಥಿತರಿದ್ದರು. ಪ್ರಾಧ್ಯಾಪಕ ನಾಗೇಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿ ಎನ್ ಭಟ್ಟ ಸ್ವಾಗತಿಸಿ ವಿಶ್ವನಾಥ ನಾಯ್ಕ ವಂದಿಸಿದರು. ಉಪನ್ಯಾಸಕಿ ಸುಜಾತ ಕಾರ್ಯಕ್ರಮ ನಿರ್ವಹಿಸಿದರು.
Leave a Comment