ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಹಿತ್ಲಳ್ಳಿ, ಕುಂದರಗಿ, ಉಮ್ಮಚಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಬಡಕುಟುಂಬಗಳಿಗೆ ” ಹೆಬ್ಬಾರ್ ರೇಷನ್ ಕಿಟ್ ” ಹೆಸರಿನಡಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ಅನ್ನು ಸಾಂಕೇತಿಕವಾಗಿ ವಿತರಿಸಿದರು.

ನನ್ನನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿ ಕಳುಹಿಸಿದ ಜನತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಕಷ್ಟಕ್ಕೆ ದ್ವನಿಯಾಗುವುದು ನನ್ನ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 63,000 ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಗುತ್ತಿದೆ ಎಂದರು.


ಈ ಸಂದರ್ಭದಲ್ಲಿ ಯುವ ನಾಯಕರಾದ ಶ್ರೀ ವಿವೇಕ್ ಹೆಬ್ಬಾರ್ , ಮಂಡಲಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗಾಂವ್ಕರ್, ಪ್ರಮುಖರಾದ ಶ್ರೀ ಗೋಪಾಲಕೃಷ್ಣ ಭಟ್ ಹಂಡ್ರಮನೆ, ಶ್ರೀಮತಿ ರೇಖಾ ಹೆಗಡೆ, ಯುವಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರದೀಪ ಯಲ್ಲಾಪುರಕರ್, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ರವಿ ಭಟ್ ಬರಗದ್ದೆ ಹಾಗೂ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment