ಶಿರಸಿ : ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ನಾಪುರ ಗ್ರಾಮದಲ್ಲಿ ಗಿಡಗಳನ್ನು ನೆಟ್ಟು ನೀರುಣಿಸುವುದರ ಮೂಲಕವಾಗಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಬನವಾಸಿಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಘನತಾಜ್ಯ ವಿಲೇವಾರಿ ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ, ಗ್ರಾಮೀಣ ಮಂಡಲಾಧ್ಯಕ್ಷರಾದ ಶ್ರೀ ಎನ್.ವಿ.ಹೆಗಡೆ, ಯುವ ನಾಯಕರಾದ ಶ್ರೀ ವಿವೇಕ್ ಹೆಬ್ಬಾರ್ ಪ್ರಮುಖರಾದ ಶ್ರೀ ದ್ಯಾಮಣ್ಣ ದೊಡ್ಮನಿ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment