ಕಾಳಿ ನದಿಯಿಂದ ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ವಾಕ್ ಮಾಡಿದೆ.
ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದ
ಗ್ರಾಮದ ಜನರು ಬೆಚ್ವಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೇ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಮತ್ತೆ ನದಿಗೆ ಸೇರಿಕೊಂಡಿದೆ.
ದಾಂಡೇಲಿಯ ಕಾಗದ ಕಾರ್ಖಾನೆ ಬಳಿ ನದಿ ತಡದಲ್ಲಿ ಅತೀ ಹೆಚ್ಚು ಮೊಸಳೆಗಳು ವಾಸಿಸುತ್ತಿವೆ.ಕಾಳಿ ನದಿಯಲ್ಲಿ ಸಾವಿರಾರು ಮೊಸಳೆಗಳು ವಾಸವಾಗಿವೆ.
ಆಹಾರ ಅರಸಿ ಮೊಸಳೆಗಳು ನದಿ ದಡದಿಂದ ಸುತ್ತಮುತ್ತ ಓಡಾಟ ನಡೆಸುತಿದ್ದು ಇಂದು ಗ್ರಾಮಕ್ಕೆ ಮೊಸಳೆ ನುಗ್ಗಿದ್ದರಿಂದ ಇದೀಗ ಜನರಲ್ಲಿ ಮತ್ತೆ ಆತಂಕ ಪಡುವಂತಾಗಿದೆ.
ಆದರೇ ನದಿಯನ್ನು ಬಿಟ್ಟು ಗ್ರಾಮಕ್ಕೆ ಇದೇ ಮೊದಲಬಾರಿ ಮೊಸಳೆ ಆಗಮಿಸಿದ್ದು ಜನರನ್ನು ಬೆಚ್ಚಿ ಬೀಳಿಸಿದೆ.
Leave a Comment