ಗೌರಿಬಿದನೂರು;ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ದೇಕೊಪ್ಪ ಗ್ರಾಮದಲ್ಲಿ ಏಳು ಮಂದಿ ಯುವಕರು ನಿರಂತರ ಅತ್ಯಾಚಾರಗೈದ ಪರಿಣಾಮ 14 ವರ್ಷದ ಎಂಟನೇ ತರಗತಿ ವಿದ್ಯಾರ್ಥಿ ಯೋರ್ವಳು 4 ತಿಂಗಳ ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಕರೋನದಿಂದಾಗಿ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲೇ ಇರುತ್ತಿದ್ದ ಬಾಲಕಿ ಮೇಲೆ ಅದೆ ಗ್ರಾಮದ ಏಳು ಮಂದಿ ಯುವಕರು ಹಣದ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ.
ಪರಿಣಾಮ ಅಪ್ರಾಪ್ತ ಬಾಲಕಿ ಆರೋಗ್ಯದ ಮೇಲೆ ಪ್ರಭಾವ ಆಗಿ ಆಸ್ಪತ್ರೆಗೆ ಹೋದಾಗ ಬಾಲಕಿ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿ ಹೇಳಿಕೆ ಮೇರೆಗೆ ಏಳು ಮಂದಿ ವಿರುದ್ಧ ದಾಖಲಿಸಲಾಗಿದೆ, ಸದ್ಯ 3 ಮಂದಿಯನ್ನು ಬಂಧಿಸಿದ್ದು ಉಳಿದ ನಾಲ್ವರಿ ಗಾಗಿ ಹುಡುಕಾಟ ನಡೆಸಿದ್ದಾರೆ . ಬಾಲಕಿಯನ್ನು ಸದ್ಯಕ್ಕೆ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರವಿಶಂಕರ್ ಮತ್ತು ಮಂಚೇನಹಳ್ಳಿ ಪಿಎಸ್ಐ ಲಕ್ಷ್ಮೀನಾರಾಯಣ್ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.
Leave a Comment