20 21 ನೇ ಸಾಲಿನ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಬೆಳೆ ಸ್ಪರ್ಧೆ ಯೋಜನೆಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ ಸಮಗ್ರ ನೀರು ನಿರ್ವಹಣೆ ಸಾವಯವ ಕೃಷಿ, ಹೈನುಗಾರಿಕೆ ,ವೈಜ್ಞಾನಿಕ ಯಂತ್ರೋಪಕರಣ ಬಳಕೆ,.
ತೋಟಗಾರಿಕೆ ,ಕೋಳಿ ಸಾಕಾಣಿಕೆ ,ಮೀನುಗಾರಿಕೆ , ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ,ಆಡು-ಕುರಿ ಸಾಕಣೆಗೆ, ಜೇನು ಸಾಕಾಣಿಕೆ ,ಸೇರಿದಂತೆ ಕೃಷಿಯಲ್ಲಿ ಸಮಗ್ರ ಸಾಧನೆ ಮಾಡಿದ ರೈತರು ಸೂಕ್ತ ದಾಖಲೆಗಳೊಂದಿಗೆ ಕೃಷಿ ಇಲಾಖೆ ಯಲ್ಲಾಪುರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ಜುಲೈ 31 ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.
Leave a Comment