ಕಾರವಾರ;
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಿದ್ಧತಾಲೂಕಿನ ಮಾಜಾಳಿಯ ಆರೋಪಿಯೋರ್ವ ನಾ ಮೇಲೆ ಇಲ್ಲಿನ ಸಿಇಎನ್ ಕ್ರೈಂ ಠಾಣೆಯಲ್ಲಿ ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ 2018ರಲ್ಲಿ ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಪೋರ್ಟಲ್ ತೆರೆಯಲಾಗಿದೆ. ಈ ಪೋರ್ಟಲ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಕ್ಕಳ ವಿರುದ್ಧ ಲೈಂಗಿಕ ಅಪರಾಧ ದೂರನ್ನು ಬೆಂಗಳೂರು ಸಿಐಡಿ ಘಟಕದಿಂದ ಕಾರವಾರ ತಾಲೂಕಿನ ಮಾಜಾಳಿಯ ಯುವಕನ ಮೇಲೆ ಕಾರವಾರದ ಸಿಇಎನ್ ಅಪರಾಧ ಠಾಣೆಗೆ ಕಳುಹಿಸಲಾಗಿದೆ.
ದೂರಿನಲ್ಲಿ ಆರೋಪಿಯು 20 20 ರ ಮೇ 17 ರಂದು ಬೆಳಗ್ಗೆ 11 .19 ಗಂಟೆಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿ ಶಿಕ್ಷಾರ್ಹ ಅಪರಾಧ ಎಸಗಿರುವುದು ಕಂಡುಬಂದಿದೆ ಎಂದು ತಿಳಿಸಲಾಗಿದೆ. ಈ ಮಾಹಿತಿಯನ್ವಯ ಕಾರವಾರದ ಸಿಇಎನ್ ಅಪರಾಧ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.
Leave a Comment