ಹೊನ್ನಾವರ: ಕಾರ್ಯನಿರತ ಪತ್ರಕರ್ತರ ಸಂಘ ಹೊನ್ನಾವರ ತಾಲೂಕಾ ಘಟಕದ ವತಿಯಿಂದ ಜು.12 ಸೋಮವಾರದಂದು ಪತ್ರಿಕಾ ದಿನಾಚರಣೆ ನಡೆಯಲಿದೆ.
ಸೋಮವಾರ ಬೆಳಗ್ಗೆ 10.30ಕ್ಕೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ಸಾಹಿತಿ ಡಾ. ಎನ್.ಆರ್. ನಾಯಕ್,ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಶಿವರಾಜ ಮೇಸ್ತ,ಸಿ.ಪಿ.ಐ ಶ್ರೀಧರ್ ಎಸ್.ಆರ್ ,ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ ಉಪಸ್ಥಿತಿ ವಹಿಸುವರು.ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಎಮ್. ಎನ್. ಸುಬ್ರಹ್ಮಣ್ಯ, ಹಿರಿಯ ಪತ್ರಿಕಾ ವಿತರಕ ಸುಬ್ರಾಯ ನಾಯ್ಕ,ಇಂಡಿಯಾ ಬುಕ್ ಆಫ್ ರೆಕಾರ್ಡ್,ಎಷ್ಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕ ಕುಮಾರ ಪ್ರದೀಪ ನಾಯ್ಕ ಅವರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Leave a Comment