ಭಟ್ಕಳ : ತಾಲ್ಲೂಕಿನ ಮಾರುಕೇರಿಯಲ್ಲಿಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟರೆ ಆಕೆಯ ತಂದೆ ಮನೆಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಾರುಕೇರಿ ಹೆಜ್ಜಿಲು ನಿವಾಸಿ ಕಾವ್ಯ ರಾಮ ಗೊಂಡ(15) ಹಾಗೂ ಆಕೆಯ ತಂದೆ ರಾಮ ಸುಕ್ರ ಗೊಂಡ (46)ಮೃತರು. ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಕಾವ್ಯ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು.
ಈಕೆ ಇದಕ್ಕಿಂದ್ದಂತೆ ಕಳೇದ ಎರಡು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು ಸೋಮವಾರ ಬೆಳಿಗ್ಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೇಲೆಯಿಂದ ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಇತ್ತ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಕೂಡ ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಒಂದೆ ಕುಟುಂಬದ ಎರಡು ಸದಸ್ಯರು ಒಂದೇ ದಿನ ಮೃತರಾಗಿದ್ದು ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.
Leave a Comment