ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ.
ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ.
ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸಲಿರುವ ಈ ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲು 44 ಆಸನ ಸಾಮರ್ಥ್ಯ ಹೊಂದಿದೆ. ಇನ್ನು ವಿಸ್ಟಾಡೋಮ್ ಕೋಚ್ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿದ್ದು, ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯವನ್ನು ಪ್ರಾಯಾಣಿಕರು ಸವಿಯಬಹುದು.
Leave a Comment