ಯಲ್ಲಾಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಾಲ್ಲಾಪುರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಜು.೧೮ (ಇಂದು) ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಹಾಗೂ ಹಿರಿಯ ಪತ್ರಕರ್ತರಾದ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಹುಬ್ಬಳ್ಳಿ ಆವೃತ್ತಿಯ ಮುಖ್ಯಸ್ಥ ವಿಠ್ಠಲದಾಸ ಕಾಮತ ಅವರಿಗೆ ಕೆ.ಶ್ಯಾಮರಾವ ಪ್ರಶಸ್ತಿ ಪ್ರಧಾನ ,ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿರಾಮ ಹೆಬ್ಬಾರ ಉದ್ಘಾಟಿಸಲಿದ್ದಾರೆ.
ತಾಲೂಕಾ ಕಾನಿಪ ಸಂಘದಿAದ ಸಾಹಿತಿ ಗಣಪತಿ ಬಾಳೆಗದ್ದೆ, ಪತ್ರಿಕೆ ಸಾಗಾಟಗಾರ ಪ್ರಶಾಂತ ಗೋಖಲೆ ಅವರನ್ನು ಸನ್ಮಾನಿಸಲಾಗುವದು.ಕಾರ್ಯಕ್ರಮ ಅಧ್ಯಕ್ಷತೆಯನ್ನು ಜಿಲ್ಲಾ ಕಾನಿಪ ಅಧ್ಯಕ್ಷ ರಾಧಕೃಷ್ಣ ಭಟ್ಟ ವಹಿಸಲಿದ್ದಾರೆ.ಹಿರಿಯ ಪತ್ರಕರ್ತೆ ಶೈಲಜಾ ಗರ್ಮನೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ವಾಕರರಾಸಾ ನಿಗಮದ ಅಧ್ಯಕ್ಷ ವಿ.ಎಸ ಪಾಟೀಲ, ಪಂ.ರಾ.ವಿ.ಅಭಿವೃದ್ದೀ ಯೋಜನೆ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾದಾಸ, ಕಾನಿಪಸಂಘದ ರಾಜ್ಯ ಸಮಿತಿ ಸದಸ್ಯ ಸುಬ್ರಾಯ ಭಟ್ಟ ಬಕ್ಕಳ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ, ಉದ್ಯಮಿ ಬಾಲಕೃಷ್ಣ ನಾಯಕ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಎಂ. ಆರ್ ಹೆಗಡೆ ,ಜಿಲ್ಲಾಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ,ಸರಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ ಉಪಸ್ಥಿತರಿರುವರು.
Leave a Comment