ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ
ಗೋಶಾಲೆ’ಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ
ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ
ಬಸವರಾಜ ಬೊಮ್ಮಾಯಿಯವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ
ಗೋ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಮೊದಲ
ಹಂತದಲ್ಲಿ ರೂ.15 ಕೋಟಿ ಬಿಡುಗಡೆ ಮಾಡಲಾಗುವುದು.
ಇನ್ನುಳಿದ
ಹಣವನ್ನು ಅಗತ್ಯಕ್ಕೆ ತಕ್ಕಂತೆ ಬಿಡುಗಡೆ ಮಾಡಲಾಗುತ್ತದೆ ಎಂದು
ಹೇಳಿದ್ದಾರೆ. ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ
ಕಾಯ್ದೆ ಜಾರಿಗೊಳಿಸಲಾಗಿದೆ. ಕಾಯ್ದೆ ಮೂಲಕ ಗೋವುಗಳ ರಕ್ಷಣೆಗೆ
ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ
ಜಿಲ್ಲೆಯಲ್ಲಿಯೂ ಗೋ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ
ಎಂದು ತಿಳಿಸಿದ್ದಾರೆ.
Leave a Comment