2020-21ನೇ ಸಾಲಿನ ಪಿಯುಸಿ ಫಲಿತಾಂಶ (PU Result) 20/7/2021 ಸಂಜೆ 4. 30ಕ್ಕೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.
http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕೂ ಮುನ್ನ Know my register numbar ಮೂಲಕ ರಿಜಿಸ್ಟರ್ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?
ಪ್ರತಿ ವರ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದ ರಿಜಿಸ್ಟರ್ ನಂ ಮೂಲಕ ಫಲಿತಾಂಶವನ್ನು ನೋಡುತ್ತಿದ್ದರು. ಆದರೆ, ಈ ಬಾರಿ ಪರೀಕ್ಷೆ ಬರೆಯದೇ ಯಾವ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶ ನೋಡುವುದು ಎಂಬ ಅನುಮಾನ ಇದೆ. ಇದೇ ಕಾರಣಕ್ಕೆ ಪಿಯು ಮಂಡಳಿ ಈ ಬಾರಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತ್ಯೇಕ ರಿಜಿಸ್ಟರ್ ನಂಬರ್ ಸೃಷ್ಟಿಸಿದೆ. ಇದನ್ನು ಕೂಡ ಮಂಡಳಿಯ ವೆಬ್ಸೈಟ್ ಮೂಲಕವೇ ಪಡೆಯ ಬೇಕಾಗಿದೆ,
ಮಂಡಳಿಯ ವೆಬ್ಸೈಟ್ http://pue.kar.nic.in/ ತೆರೆದಾಕ್ಷಣ ನಿಮಗೆ Know my register numbar ಎಂಬ ಲಿಂಕ್ ಸಿಗುತ್ತದೆ. ಅದನ್ನು ಕ್ಲಿಕ್ ಮಾಡಿದರೆ ಅದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ರಿಜಿಸ್ಟರ್ ನಂಬರ್ ಸಿಗಲಿದೆ. ಈ ಲಿಂಕ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದು.
ಪಿಯು ಫಲಿತಾಂಶ ಪಡೆಯಲು ಇಲ್ಲಿ ಕ್ಲಿಕ್ ಮಾಡಿ;. https://dpue-exam.karnataka.gov.in/iipu2021_registrationnumber
Leave a Comment