ಬೆಂಗಳೂರು
ರಾಜ್ಯದಲ್ಲಿ ಈಗಾಗಲೇ ಗೋಹತ್ಯ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಾಗಾಗಿ ಬಕ್ರೀದ್ ಹಬ್ಬದ ಸಮಯದಲ್ಲಿ ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಲು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಕ್ರೀದ್ ಸಂದರ್ಭದಲ್ಲಿ ಸಾಮಾನ್ಯವಾಗಿ ಬಲಿಕೊಡುವ ಸಂಪ್ರದಾಯವಿದ್ದು, ಇದಕ್ಕಾಗಿ ಗೋವುಗಳನ್ನು ಸಹ ಬಳಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಲಲು ಪೋಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ರಾಜ್ಯದ ಎಲ್ಲ ಗಡಿಭಾಗಗಳಲ್ಲಿ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಎಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ತಿಳಿಸಲಾಗಿದ್ದು ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಎಚ್ಚರವಹಿಸಲಾಗುತ್ತಿದೆ. ಆಕ್ರಮ ಕಂಡುಬಂದಲ್ಲಿ ಪಶು ಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಆದರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ.
Leave a Comment