• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯುವಕರು ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು;ಎಸ್.ಜೆ.ಕೈರನ್ ಕರೆ

July 22, 2021 by Vishwanath Shetty Leave a Comment

ಹೊನ್ನಾವರ: ಯುವಶಕ್ತಿ ರಾಷ್ಟçಶಕ್ತಿಯಾಗಿದ್ದು, ನಾಯಕತ್ವ ಗುಣ, ಅನುಭವ ಮತ್ತು ಅವಕಾಶ ನೀಡಬಲ್ಲ ಲಿಯೋಕ್ಲಬ್ಬಿಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ನೊಂದವರಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ಜೆ.ಕೈರನ್ ಕರೆ ನೀಡಿದರು.


ಲಯನ್ಸ್ ವಿದ್ಯಾಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಅಡಿಯಲ್ಲಿ ಬರುವ ಲಿಯೋ ಕ್ಲಬ್ಬಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ  ವಚನ ಬೋಧಿಸಿದ ಬಳಿಕ ಮಾತನಾಡಿ ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಈ ಲೋಕವನ್ನೇ ಬಿಟ್ಟು ಹೋಗುವಾಗ ನಾವು ಗಳಿಸಿದ ಸಂಪತ್ತನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ.

ಅದನ್ನು ಪುಣ್ಯದ ರೂಪದಲ್ಲಿ ತೆಗೆದುಕೊಂಡು ಹೋಗಲು ಸಾಧ್ಯ. ಆದ್ದರಿಂದ ಲಿಯೋ ಕ್ಲಬ್ ತಂಡವು ಸೇವಾ ಮನೋಭಾವನೆಯಂತಹ  ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು s ಸಮಾಜ ಸೇವೆಗೆ ಸನ್ನದ್ಧರಾಗುವಂತೆ ಕರೆ ನೀಡಿದರು.


 ಎಸ್.ಡಿ.ಎಮ್. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿಜಯಲಕ್ಷಿö್ಮ ನಾಯ್ಕ ಮಾತನಾಡಿ ಮನಸ್ಸಿದ್ದೆಡೆ ಮಾರ್ಗವಿದ್ದು, ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಅಧ್ಯಯನದ ನಡುವೆಯು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು. ಇಂದಿನ ವಿದ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳಿದ್ದು, ಲಯನ್ ಸಂಸ್ಥೆಯ ಮಾರ್ಗದರ್ಶನದಲ್ಲಿ ಅವಕಾಶಗಳನ್ನು ಬಳಸಿಕೊಂಡು, ಬಿಡುವಿನ ವೇಳೆಯಲ್ಲಿ ಸಮಾಜಮುಖಿ ಕಾರ್ಯಗಳತ್ತ ಗಮನಹರಿಸುವ ಮೂಲಕ ಸೇವಾ ಮನೋಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಲಿಯೋ ಕ್ಲಬನ ನೂತನ ಪದಾಧಿಕಾರಿಗಳಿಗೆ ತಿಳಿಸಿದರು.
 ಲಯನ್ಸ ಅಧ್ಯಕ್ಷ ವಿನೋಧ ನಾಯ್ಕ ಮಾವಿನಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

  ವೇದಿಕೆಯಲ್ಲಿz ಜೋನ್ ಚೇರ್ ರಾಜೇಶ ಸಾಳೇಹಿತ್ತಲ್, ನಿಕಟಪೂರ್ವ ಅಧ್ಯಕ್ಷ ಪ್ರದೀಪ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷ ಸ್ವಾತಿ ಶೇಟ್, ಡಾ.ಸುಬ್ರಹ್ಮಣ್ಯ ಭಟ್ಟ, ಧನ್ಯಾ ಭಟ್ಟ, ಚಿತ್ರಾ ಭಟ್ಟ  ಉಪಸ್ಥಿತರಿದ್ದರು. ಲಯನ್ ಕಾರ್ಯದರ್ಶಿ ಉದಯ ನಾಯ್ಕ ಸ್ವಾಗತಿಸಿ ಸುರೇಶ ಎಸ್. ಕಾರ್ಯಕ್ರಮ ನಿರ್ವಹಿಸಿದರು. 

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,237 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar