ಹೊನ್ನಾವರ: ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನಾವರದ ಕೃಷ್ಣ ನಾರಾಯಣ ನಾಯ್ಕ ಮಾರಿಮನೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೇಸ್ ಸೇವಾದಳ ಅಧ್ಯಕ್ಷರಾದ ಪ್ಯಾರಿಜಾನ್ ರವರ ನಿರ್ದೇಶನದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸೇವಾದಳದ ಜಿಲ್ಲಾ ಅಧ್ಯಕ್ಷರಾದ ಆರ್. ಎಚ್. ನಾಯ್ಕ ರವರು ಕೃಷ್ಣ ನಾರಾಯಣ ನಾಯ್ಕ ಮಾರಿಮನೆ, ಹೊನ್ನಾವರ ಅವರನ್ನು ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತದ ಮೇರೆಗೆ ಜಾತ್ಯಾತೀತ ನಿಲುವಿನ ಅಡಿಯಲ್ಲಿ ಪಕ್ಷದ ನಾಯಕರು ನೀಡುವ ನಿರ್ದೇಶನದ ಮೆರೆಗೆ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸಲು ಶ್ರಮಿಸುವಂತೆ ಆದೇಶ ನೀಡಿರುತ್ತಾರೆ. ಜಿಲ್ಲೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಗೆ ಪಕ್ಷದ ತತ್ವ ಸಿದ್ದಾಂತದ ನಿಯಮಗಳನ್ನು ರೂಢಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಸೇವಾದಳದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳುವಂತೆ ಕಾಂಗ್ರೇಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಕೈ ಬಲಪಡಿಸುವಂತೆ ನಿರ್ದೇಶನ ನೀಡಿರುತ್ತಾರೆ.
ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲು ಸಹಕರಿಸಿದವರಿಗೆ ಕೃಷ್ಣ ನಾರಾಯಣ ನಾಯ್ಕ ಮಾರಿಮನೆ ಧನ್ಯವಾದ ಸಲ್ಲಿಸಿದ್ದಾರೆ.
Leave a Comment