ಉತ್ತರ ಪ್ರದೇಶ : ಡಬ್ಬಲ್ ಡೆಕ್ಕರ್ ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿ19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ- ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬರಾಬಂಕಿ ಎಂಬಲ್ಲಿ ನಡೆದಿದೆ.
ಬಸ್ಸು ಹರ್ಯಾಣದಿಂದ ಬಿಹಾರ ಕಡೆಗೆ ಪ್ರಯಾಣಿಸುತ್ತಿತ್ತು.ಮಧ್ಯರಾತ್ರಿ 1: 30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಡೆದಿದ್ದು, ಘಟನೆಯಲ್ಲಿ18 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 19 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ದುರ್ಘಟನೆ ಸಂಭವಿಸುವ ವೇಳೆ ತಡರಾತ್ರಿ ರಸ್ತೆ ಬದಿ ಬಸ್ಸನ್ನು ನಿಲ್ಲಿಸಲಾಗಿತ್ತು. ಬಸ್ಸಿನಲ್ಲಿ ಸ್ವಲ್ಪ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದುರಸ್ತಿಗೆಂದು ಚಾಲಕ ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರಿಗೆ ತಿಳಿಸಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದರು.
ಆಗ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದೆ .
ಪ್ರಧಾನಿ ಸಂತಾಪ, ಪರಿಹಾರ ಘೋಷಣೆ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Leave a Comment