ಕುಮಟಾ : ತಾಲೂಕಿನ ಗೋಕರ್ಣದ ಕೋಟಿತೀರ್ಥದಲ್ಲಿ ವ್ಯಕ್ತಿಯೋರ್ವ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಕುಮಟಾ ಪಟ್ಟಣದ ಹೆರವಟ್ಟಾ ನಿವಾಸಿ ದಾಮೋದರ ನಾರಾಯಣ ಗೌಡ ಮೃತ ವ್ಯಕ್ತಿಯಾಗಿದ್ದಾನೆ.
ಈತ ಗೋಕರ್ಣದ ಕೋಟಿ ತೀರ್ಥದಲ್ಲಿ ಈಜಲು ತೆರಳುತ್ತಿರುವಾಗ ಮೆಟ್ಟಿಲಿನಿಂದ ಆಕ್ಮಸಿತವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಶವ ತೆಲುತ್ತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪಿ.ಎಸ್.ಐ ನವೀನ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಶವವನ್ನು ಮೇಲೆಕ್ಕೆತ್ತಿ ಗೋಕರ್ಣ ಪ್ರಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಸಾಗಿಸಿದ್ದಾರೆ. ಪ್ರಕರಣ ದಾಖಲಾಗಿದೆ.

Leave a Comment