
ಯಲ್ಲಾಪುರ : ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ನೆರೆಹಾವಳಿಯಿಂದ ಜನತೆ ತತ್ತರಿಸಿ ಹೋಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಮುಂಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್ ಹೇಳಿದರು.
ಅವರು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆಯ ಸಿದ್ಧತೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಹೇಳಿದರು.
ಸಂಭ್ರಮ ಸಡಗರದಿಂದ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದ್ದು ಕಳೆದ ವರ್ಷದಿಂದ ಕೊರೊನಾ ಹೆಮ್ಮಾರಿಯ ಕಾಟಕ್ಕೆ ರಾಷ್ಟಿçÃಯ ಹಬ್ಬಗಳೂ ಬಲಿಯಾಗಿವೆ. ಬಹುಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಕೊರೊನಾದಿಂದ ಗಂಭೀರ ಸಮ್ಯೆಯಾಗಿದ್ದು ಕಳೆದ ವರ್ಷವೂ ವಿದ್ಯಾರ್ಥಿಗಳಿಲ್ಲದೇ ಸೀಮಿತ ಸಂಖ್ಯೆಯಲ್ಲಿ ಸರಳವಾಗಿ ಆಚರಿಸಲಾಗಿತ್ತು. ಅದರಂತೆಯೇ ಈ ವರ್ಷವೂ ಪೊಲೀಸ್ ಇಲಾಖೆ, ಗೃಹ ರಕ್ಷಕದಳ, ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್, ಭಾರತ ಸೇವಾದಳ, ಪದವಿ ಕಾಲೇಜಿನ ವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಿ ಸ್ವಾತಂತ್ರೊö್ಯÃತ್ಸವವನ್ನು ಸರಳ ಹಾಗೂ ಶಿಸ್ತುಬದ್ಧವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಅರುಣ್ ನಾಯ್ಕ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶಾಮಿಲಿ ಪಾಟಣಕರ್, ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ, ಕೃಷಿ ಅಧಿಕಾರಿ ನಾಗರಾಜ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿ ರಫೀಕಾ ಹಳ್ಳೂರು , ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯ್ಕ, ಭಾರತ ಸೇವಾದಳ ತಾಲೂಕಾಧ್ಯಕ್ಷ ಎಂ.ಆರ್ ಹೆಗಡೆ ಕುಂಬ್ರಿ, ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ಪ್ರಮುಖ ನಂದನ ಬಾಳಗಿ, ಅಂಬೇಡ್ಕರ್ ಕ್ರಿಯಾ ಸಮಿತಿ ಅಧ್ಯಕ್ಷ ಜಗನ್ನಾಥ ರೇವಣಕರ್, ದೈಹಿಕ ಶಿಕ್ಷಕ ನಾರಾಯಣ ನಾಯ್ಕ, ಸಂಜೀವ ಹೊಸ್ಕೇರಿ, ಸುಧಾಕರ ನಾಯ್ಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಇನ್ನಿತರರು ಸಭೆಯಲ್ಲಿ ಭಾಗವಹಿಸಿದ್ದರು.
Leave a Comment