
ಯಲ್ಲಾಪುರ: ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ಜ್ಞಾನ ಭಾರತಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವರ ಸಹಯೋಗದಲ್ಲಿ ಅಗಸ್ಟ್ 20ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ಬ್ಯಾಂಕಿಂಗ್, ರೈಲ್ವೆ, ಪೊಲೀಸ್ ಹಾಗೂ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬಡ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳ ನೇಮಕಾತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿಧಾನಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ.
ಸರ್ಕಾರ 15ಸಾವಿರ ಪೊಲೀಸ್ ಹಾಗೂ ಪಿ.ಎಸ್.ಐ ನೇಮಕಾತಿಯ ಅಧಿಸೂಚನೆ ಹೊರಡಿಸಿದ್ದು, ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿಯೂ ಸಾಕಷ್ಟು ಉದ್ಯೋಗವಕಾಶಗಳು ಇರುವದರಿಂದ ಈ ತರಬೇತಿ ಮಹತ್ವ ಪಡೆದಿದೆ. ತರಬೇತಿಯ ದಾಖಲಾತಿಗೆ ಅಗಸ್ಟ್ 17 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು 7337875279ಗೆ ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಯಲ್ಲಾಪುರ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ
ಗ್ರುಪ್ ಸೇರಲು ಈ ಲಿಂಕ್ ಒತ್ತಿ https://chat.whatsapp.com/D0Ry5Povwke1s77ibSLq4A
Leave a Comment