ಯಲ್ಲಾಪುರ : ರಾಜ್ಯ ಸಚಿವ ಸಂಪುಟದಲ್ಲಿಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕ್ಷೇತ್ರಕ್ಕೆ ಆಗಮಿಸಿದ ಸಚಿವಶಿವರಾಮ ಹೆಬ್ಬಾರ್ ಅವರನ್ನು ಪಕ್ಷದ ಕಾರ್ಯಕರ್ತರು ಸಂಭ್ರಮ ದಿಂದ ಸ್ವಾಗತಿಸಿದರು.
ನಂತರ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಿಂದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕಾಲುನಡಿಗೆಯಲ್ಲಿ ಗ್ರಾಮದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಹಾಗೂ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದ್ ರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಉಪಾಧ್ಯಕ್ಷಶಿರಿಷ್ ಪ್ರಭು, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಮುಖರಾದ ವಿಜಯ ಮಿರಾಶಿ, ಬಾಲಕೃಷ್ಣ ನಾಯಕ,ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದಾ ದಾಸ್,ಗಣಪತಿ ಮುದ್ದೆಪಾಲ್, ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷರಾದ ಚಂದ್ರಕಲಾ ಭಟ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶ್ರುತಿ ಹೆಗಡೆ, ಹಾಗೂ ಪಟ್ಟಣ ಪಂಚಾಯತ ಸದಸ್ಯರು ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಯಲ್ಲಾಪುರ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ
ಗ್ರುಪ್ ಸೇರಲು ಈ ಲಿಂಕ್ ಒತ್ತಿ https://chat.whatsapp.com/D0Ry5Povwke1s77ibSLq4A
Leave a Comment