ಬೆಂಗಳೂರು : ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲ ರಾಜ್ಯಾದ್ಯಂತ ರಾತ್ರಿ 9 ರಿಂದಲೇ ನೈಟ್ ಕಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ರಾತ್ರಿ ಕರ್ಫ್ಯೊ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಜಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟç ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ನಲ್ಲಿ ವಾರಾಂತ್ಯ ಲಾಕ್ಡೌನ್ ಜಾರಿಗೊಳಿಸಲಾಗುತ್ತಿದೆ.

ಕೊವಿಡ್ ಮೂರನೇ ಅಲೆಯ ಆತಂಕದಲ್ಲಿಯೇ ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳನ್ನು ಆರಂಭಿಸುವ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ 9,10 ಹಾಗೂ ಪಿಯುಸಿ ತರಗತಿಗಳನ್ನು ಆ. 23ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾಂರಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದಾರೆ.
Leave a Comment