• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅತಿಕ್ರಮಣ ಗೂಡಂಗಡಿ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ಆಗ್ರಹ

August 7, 2021 by Vishwanath Shetty Leave a Comment

ಹೊನ್ನಾವರ : ನವಗ್ರಾಮ ಯೋಜನೆಯಡಿಯಲ್ಲಿ ಮನೆಗೆ ಮಂಜೂರಾದ ಜಾಗದಲ್ಲಿ ಅನ್ಯ ವ್ಯಕ್ತಿಯೊಬ್ಬರು ಅತಿಕ್ರಮಣ ಮಾಡಿ ನಿರ್ಮಿಸಿದ ಗೂಡಂಗಡಿಯನ್ನು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯಗಜ ಸೇನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಆಗ್ರಹಿಸಿದರು.


ಹೊನ್ನಮ್ಮ ಮಂಜುನಾಥ ನಾಯ್ಕ ಎನ್ನುವ ಮಹಿಳೆಗೆ ನವಗ್ರಾಮ ಯೋಜನೆಯಡಿಯಲ್ಲಿ ಈ ಹಿಂದೆ ಮಂಜೂರಾದ ಜಾಗದಲ್ಲಿ ಇದೀಗ ಒತ್ತುವರಿಯಾಗಿದ್ದು ಮಹಿಳೆಗೆ ಮನೆ ಕಟ್ಟಲು ತೊಂದರೆಯಾಗುತ್ತಿದೆ. ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆಯ ವತಿಯಿಂದ ಮಿನಿವಿಧಾನಸೌದದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಶೀಘ್ರವೇ ಅತಿಕ್ರಮಣ ತೆರವುಗೊಳಿಸಿ ಮಹಿಳೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

ನೀಲಕಂಠ ನಾಯ್ಕ ಮಾಧ್ಯಮದವರೊಂದಿಗೆ ಮಾತನಾಡಿÀ ಹೊನ್ನಮ್ಮ ಮಂಜುನಾಥ ನಾಯ್ಕ ಇವರಿಗೆ ಮಂಜೂರಾದ ಜಾಗದಲ್ಲಿ ಮನೆಗೆ ಅಡಿಪಾಯ ಹಾಕಿದ್ದರು, ಅವರ ಮಗನ ಅಗಲುವಿಕೆಯಿಂದ ಮನೆ ನಿರ್ಮಾಣದ ಕಾರ್ಯ ಅರ್ಧಕ್ಕೆ ನಿಂತಿತ್ತು. ನಂತರ ಆ ಜಾಗವನ್ನು ಇನ್ನೊಬ್ಬ ವ್ಯಕ್ತಿ ಅತಿಕ್ರಮಣ ಮಾಡಿದ್ದಾರೆ. ಇದರಿಂದ ಇವರ ಮನೆಯ ನಿರ್ಮಾಣಕ್ಕೆ ತೊಂದರೆಯಾಗಿದೆ. ಇದನ್ನು ಸರಿಪಡಿಸುವಂತೆ ಹಲವು ಬಾರಿ ಮನವಿ ನೀಡಿದರು ಅಧಿಕಾರಿಗಳು ಸ್ಪಂದಿಸಿಲ್ಲ ಎಂದರು .


ಗಣೇಶ್ ನಾಯ್ಕ ಮಾತನಾಡಿ ಅತಿಕ್ರಮಣದ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿ ಪ್ರಯೋಜನವಾಗಲಿಲ್ಲ ನಾವು ಇದುವರೆಗೂ ಶಾಂತಿಯುತ ಪ್ರತಿಭಟನೆ ನಡೆಸಿದ್ದೆವೆ. 2 ದಿನದೊಳಗೆ ಅತಿಕ್ರಮಣ ತೆರವುಗೊಳಿಸಿ ಮಹಿಳೆಗೆ ನ್ಯಾಯ ಒದಗಿಸದೇ ಇದ್ದಲ್ಲಿ ಭಟ್ಕಳ ಸಹಾಯಕ ಆಯುಕ್ತರ ಕಛೇರಿಯ ಎದುರು ಧರಣಿ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

  • Screenshot 2021 08 06 15 39 50 89 2768c6f3dd71c987876b7b9730ce2453
  • Screenshot 2021 08 06 15 40 01 41 2768c6f3dd71c987876b7b9730ce2453

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆಯ ಜಿಲ್ಲಾಧ್ಯಕ್ಷ ಉಮೇಶ ಹರಿಕಾಂತ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಶಿಲ್ಪಾ ನಾಯ್ಕ. ಪದಾದಿಕಾರಿಗಳಾದ ವಿನೋದ ಗೌಡ, ಶೇಖರ ಮೋಗೆರ್, ಮಹೇಶ ನಾಯ್ಕ, ಗಿರೀಶ ನಾಯ್ಕ, ನೀಲಕಂಠ ನಾಯ್ಕ ಮುಂತಾದವರು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಕರ್ನಾಟಕ ರಕ್ಷಣಾ ವೇದಿಕೆ, ಗಜ ಸೇನೆಯ ವತಿಯಿಂದ, ಮಂಜೂರಾದ ಜಾಗದಲ್ಲಿ ಮನೆಗೆ ಅಡಿಪಾಯ, ಮಹಿಳೆಗೆ ನವಗ್ರಾಮ ಯೋಜನೆ, ಮಿನಿವಿಧಾನಸೌದದ ಮುಂಭಾಗದಲ್ಲಿ ಪ್ರತಿಭಟನೆ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...