
ಯಲ್ಲಾಪುರ : ಕೋವಿಡ್ ಹಾಗೂ ನೆರೆಗೆ ಸಂಬಂಧಿಸಿದಂತೆ ಶನಿವಾರ ಬೆಳಿಗ್ಗೆ ಕಾರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು ಸಭೆಗೆ ಆಗಮಿಸುತ್ತಿದ್ದ ಅಧಿಕಾರಗಳ ಕಾರು ಅಂಕೋಲಾ ತಾಲೂಕಿನ ಬಾಳೆಗುಳಿ ಸಮೀಪ ಅಫಘಾತವಾಗಿ ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಕಾರವಾರಕ್ಕೆ ಸಭೆಗೆ ತೆರಳುತ್ತಿದ್ದ ಸಚಿವರು ಈ ಘಟಕ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಂಕೋಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಅಧಿಕಾರಿಗಳನ್ನು ಮಂಗಳೂರಿಗೆ ಸಾಗಿಸುವುದಕ್ಕೆ ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಮಾಡಿದರು.
Leave a Comment