• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿ; ಕೃಷಿ ಅಧಿಕಾರಿ

August 11, 2021 by Vishwanath Shetty Leave a Comment

ಹೊನ್ನಾವರ; ಕೃಷಿ ಇಲಾಖೆ, ಹೊನ್ನಾವರ ತಾಲೂಕಾ ಪಂಚಾಯತ, “ರೈತರಿಗಾಗಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿಗೆ ತಂದಿದೆ ಎಂದು ಕೃಷಿ ಅಧಿಕಾರಿ ಪುನೀತಾ ಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ರೈತ ಬಾಂಧವರಿಗೆ ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ಮಾಡುವ ಒಂದು ವಿನೂತನ ಯೋಜನೆ ಇದಾಗಿದ್ದುಬೆಳೆ ಸಮೀಕ್ಷೆ ಆ್ಯಪ್ ಇದಾಗಿದೆ.

ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಬಳಸಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ “Farmers Crop Survey App 2021-22 ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆರ್ಥಿಕ ವರ್ಷ ಹಾಗೂ ಋತು ದಾಖಲಿಸಿದ ಬಳಿಕ ರೈತರ ಹೆಸರು ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸಬೇಕು. ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. OTP ನಮೂದಿಸಿ ನೋಂದಣಿ ಮಾಡಿಕೊಳ್ಳುವುದುಆ ಬಳಿಕ ವಿವರ ಡೌನಲೋಡ ಮಾಡುವುದು ನಂತರ ಪಹಣಿ ಮತ್ತು ಮಾಲೀಕರ ವಿವರದ ಮೇಲೆ ಕ್ಲಿಕ್ ಮಾಡಬೇಕು.

Farmers Crop Survey App

ಜಿಲ್ಲೆ ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ ಸರ್ವೆ ನಂ ನಮೂದಿಸುವುದು. ನಂತರ  ಕ್ಷೇತ್ರ ನಮೂದಿಸುವುದು. ರೈತರು ಸ್ವಂತ ಜಮೀನಿನ ವಿವರ ದಾಖಲಿಸುತ್ತಿದ್ದರೆ ಸ್ವತಃ ಆಯ್ಕೆಮಾಡುವುದು. ಒಂದು ವೇಳೆ ಸ್ನೇಹಿತರು ಸಂಬಂಧಿಕರ ಹೊಲದ ಮಾಹಿತಿಯನ್ನು ಅಪ್‌ಲೋಡ ಮಾಡುತ್ತಿದ್ದರೆ ರೈತರ ಪರವಾಗಿ ಮಾಹಿತಿಯನ್ನು ದಾಖಲಿಸುತ್ತಿದ್ದೇನೆಂದು ಆಯ್ಕೆ ಮಾಡಿ ಆ ರೈತರ ಮೊಬೈಲ್ ಸಂಖ್ಯೆಯನ್ನು ದಾಖಲಿಸುವುದು ಮತ್ತು ಪಹಣಿ ವಿವರ ಡೌನ್‌ಲೋಡ್ ಮಾಡುವುದು. 

 ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರಗಳನ್ನು ದಾಖಲಿಸಿ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಛಾಯಾ ಚಿತ್ರಗಳನ್ನು ತೆಗೆದು ಆಪ್‌ಲೋಡ್ ಮಾಡಲಾದ ಬೆಳೆ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಇಲಾಖಾ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುವುದು.ಸಂಗ್ರಹಿಸಲಾದ ಬೆಳೆ ಮಾಹಿತಿಯನ್ನು ಸರ್ಕಾರದ ವಿವಧ ಯೋಜನೆಗಳ ಸಹಾಯಧನ ಪರಿಪಾಠ ಬೆಂಬಲ ಬೆಲೆ ಬೆಳೆ ಸಾಲ ನೀಡಲು ಬಳಸಲಾಗುವುದು.

ಸ್ವಾಭಿಮಾನಿ ರೈತನನ್ನಾಗಿಸುದು. ರೈತರಿಂದಲೇ  ಬೆಳೆ ಸಮೀಕ್ಷೆಯ ಉದ್ದೇಶವಾಗಿದೆ.  ಪಹಣಿಯಲ್ಲಿ ಬೆಳೆ ಏವರ ದಾಖಲಿಸುದು.ಎನ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್. ಐಡಿಯಲ್ಲ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುವಿಸಲು ಅನೂಕೂಲವಾಗಲಿದೆ. ಬೆಳೆ ಏಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ಬಿಸ್ತೀರ್ಣ ವರದಿ ಕಾರ್ಯದಲ್ಲಿ ಅನೂಕೂಲವಾಗಲಿದೆ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು.

ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಅನೂಕೂಲವಾಗಲಿದೆ. ತಾವು ಬೆಳೆದ ಬೆಳೆಯನ್ನು ಮೊಬೈಲ್ ಆ್ಯಪ್ ಬಳಸಿ, ಬೆಳೆ ಸಮೀಕ್ಷೆ ಮಾಡಿ ತಮ್ಮ ಪಹಣಿಯಲ್ಲಿ ತಾವೇ ಬೆಳೆ ನಮೂದಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 08387-220643 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

Farmers Crop Survey App link

https://play.google.com/store/apps/details?id=com.csk.Khariffarmer2021.cropsurvey&hl=en_US&gl=US

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News, ಕೃಷಿ, ಮಾಹಿತಿ Tagged With: Farmers Crop Survey App, ಅರ್ಹ ಫಲಾನುಭವಿ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಪರಿಹಾರ ವಿತರಿಸಲು, ಪಹಣಿ ವಿವರ ಡೌನ್‌ಲೋಡ್, ಬೆಳೆದ ಬೆಳೆಯ ವಿವರ, ರೈತರಿಂದಲೇ  ಬೆಳೆ ಸಮೀಕ್ಷೆಯ ಉದ್ದೇಶ, ರೈತರು ತಮ್ಮ ಜಮೀನಿನಲ್ಲಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,117 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...