ಕಾರವರ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಮತ್ತು ಪ್ರಯಾಣಿಕರಿಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನದ ಅಂಗವಾಗಿ ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಎಲೆ, ಅಡಿಕೆ ಗುಟ್ಕಾ, ಧೂಮಪಾನ ನಿಷೇಧಿಸಲಾಗಿದೆ.
ಈ ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸಲಾಗುತ್ತಿದೆ. ಜುಲೈ ತಿಂಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳಲ್ಲಿ ಒಟ್ಟು ರೂ.55,000 ಮೊತ್ತದ ದಂಡವನ್ನು ವಿಧಿಸಲಾಗಿದೆ. ಪರಿಣಾಮಕಾರಿ ಜಾಗೃತಿಗಾಗಿ ಪ್ರಯಾಣಿಕರ ಟಿಕಡಟ್ಗಳ ಮೇಲೆ ಸಹ ಮುದ್ರಿತ ಸಂದೇಶ ಬರುವಂತೆ ಕ್ರಮ ಕೈಗೊಳ್ಳಲಾಗಿದೆ.
ಸಾರ್ವಜನಿಕರು, ಪ್ರಾಯಾಣಿಕರು ಬಸ್ಗಳು ಮತ್ತು ಬಸ್ ನಿಲ್ದಾಣಗಳ ಸ್ವಚ್ಛತೆಯ ದೃಷ್ಟಿಯಿಂದ ಸಂಸ್ಥೆಯ ಜೊತೆ ಸಹಕರಿಸಬೇಕೆಂದು ವಾಕರಸಾ.ಸಂಸ್ಥೆಯ ಹುಬ್ಬಳ್ಳಿ ಕೇಂದ್ರ ಕಛೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಕೋರಿದ್ದಾರೆ.
Leave a Comment