ಅಂಕೋಲಾ : ಖಾಸಗಿ ಕಂಪನಿ ಉದ್ಯೋಗಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಣಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗೌತಮ ಫ್ರಭಾಕರ ನಾಯ್ಕ (27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಂಪ್ಯೂಟರ್ ಸೈನ್ಸ್ ಮಾಡಿ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದನು.
ಕೋವಿಡ್ ಎರಡನೇ ಅಲೆಯಲ್ಲಿ ಅಂಕೋಲಾಕ್ಕೆ ಆಗಮಿಸಿ ಮನೆಯಿಂದಲೇ ಕಂಪನಿಯ ಕೆಲಸವನ್ನು ನಿರ್ವಹಿಸುತ್ತಿದ್ದನು. ಸೋಮವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment