ಬೆಂಗಳೂರು: ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿದ್ದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆ ದಿನಾಂಕ ಕೊನೆಗೂ ನಿರ್ಧಾರವಾಗಿದ್ದು, 2022ರ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ.ಈ ಕುರಿತು ರಾಕಿಂಗ್ ಸ್ಟಾರ್ ಯಶ್ ಟ್ವಿ ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 2022ರ ಏಪ್ರಿಲ್ 14ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಹೊಸ ಪೆÇೀಸ್ಟರ್ ನ್ನು ಕೂಡ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.ಇμÉ್ಟೂತ್ತಿಗಾಗಲೇ ಕೆಜಿಎಫ್-2 ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್ ಕಾರಣಗಳಿಂದಾಗಿ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆಯಾಗುತ್ತಲೇ ಇತ್ತು. ಚಿತ್ರ ಬಿಡುಗಡೆಗಾಗಿ ಸಿನಿಪ್ರಿಯರು ಕಾಯುತ್ತಿದ್ದರು. ಕೊನೆಗೂ ಕೆಜಿಎಫ್-2 ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
Leave a Comment