ಯಲ್ಲಾಪುರ : ಸ್ಥಳೀಯ ಲಯನ್ಸ್ ಕ್ಲಬ್ ವತಿಯಿಂದ ಆಗಸ್ಟ್ 28 ರಂದು ಸಂಚೆ ಪಟ್ಟಣದ ಶ್ರೀವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಧಾ-ಕೃಷ್ಣ ಛದ್ಮವೇಷ ಸ್ಪರ್ಧೆಯನ್ನು ಅಯೋಜಿಸಲಾಗಿದೆ.
ನಂದಗೋಕುಲ 2021ರ ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. 6 ವರ್ಷದ ಒಳಗಿನ ಮಕ್ಕಳಿಗೆ ಬಾಲಗೋಪಾಲ ಸ್ಪರ್ಧೆ ಹಾಗೂ 8 ವರ್ಷದ ಒಳಗಿನ ಮಕ್ಕಳಿಗೆ ರಾಧಾಕೃಷ್ಣ ಸ್ಪರ್ಧೆ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಪ್ರಕಟಣೆ ತಿಳಿಸಿದೆ.
ಭಾಗವಹಿಸಲಿಚ್ಛಿಸುವ ಮಕ್ಕಳ ಪಾಲಕರು ಮೊ.ಸಂ : 63608 22913 94482 21239 94810 53905ಗೆ ಸಂಪರ್ಕಿಸಲು ಕೋರಲಾಗಿದೆ.
Leave a Comment