ಭಟ್ಕಳ: ನಗರದ ನವಾಯತ್ ಕಾಲೋನಿಯ ಅಮೀನುದ್ದೀನ್ ರಸ್ತೆಯಲ್ಲಿ ಎರಡು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದಾನೆ.
ಬದ್ರಿಯಾ ಕಾಲೋನಿಯ ಇಮ್ರಾನ್ ಕ ಮಹಮದ್ ಜಾಫರ್ (42) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇಮ್ರಾನ್ ತನ್ನ ಪತ್ನಿ ಮತ್ತು ಆತನ ಎಂಟು ತಿಂಗಳ ಮಗಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಎದುರಿನ ಬೈಕ್ ಸವಾರ ಅಪಘಾತದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ ಅಪಘಾತ ನಡೆದಾಗ ಗಂಭೀರ ಗಾಯಗೊಂಡ ಇಮ್ರಾನನ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಉಡುಪಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ
Leave a Comment