ಹೊನ್ನಾವರ ತಾಲೂಕಿನ ಕರ್ಕಿಯ ಜ್ಞಾನೇಶ್ವರಿ ಮಠಕ್ಕೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರ ಆರ್ಶಿವಾದ ಪಡೆದರು. ಮಠದಲ್ಲಿ ೩೬ ನೇ ಚಾತುರ್ಮಾಸ್ಯ ವ್ರತದಲ್ಲಿರುವ ದೈವಜ್ಞ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ, ಉಮೇಶ ನಾಯ್ಕ, ಸುಬ್ರಾಯ ನಾಯ್ಕ, ಸಚೀನ್ ಶೇಟ್, ದೀಪಕ್ ಶೇಟ್ ಮತ್ತಿತರರು ಉಪಸ್ಥಿತರಿದ್ದರು.
Leave a Comment