ಹೊನ್ನಾವರ : ತಾಲೂಕಿನ ಗೇರುಸೊಪ್ಪ, ಮಾಸ್ತಿಮನೆ, ಬಂಗಾರ ಕುಸುಮ ಹತ್ತಿರ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಸುಬ್ರಹ್ಮಣ್ಯ ಕೃಷ್ಣಯ್ಯ ಕೊವುರು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರನ್ನು ಚಾಲಕ ಬಿ. ಅಯ್ಯಪ್ಪರೆಡ್ಡಿ ರಾಮಕೃಷ್ಣ ಬಂಡಾರು ಚಲಾಯಿಸುತ್ತಿದ್ದಾಗ ಈ ಅವಘಡ ನಡೆದಿದೆ.
ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಅತಿವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದು ಚಾಲಕ ನಿಯಂತ್ರಣ ಕಳೆದುಕೊಂಡು ಕಾರನ್ನು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಯದಿಂದ ಪಾರಾಗಿದ್ದಾರೆ . ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Leave a Comment