ಮಧ್ಯರಾತ್ರಿಯ ವೇಳೆ ತಮ್ಮ ವಾಹನದಲ್ಲಿನ ಮ್ಯೂಸಿಕ್ ಸಿಸ್ಟಮ್ ನಲ್ಲಿ ಜೋರಾಗಿ ಹಾಡುಗಳನ್ನು ಹಚ್ಚಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಇಬ್ಬರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದ ಘಟನೆ ಭಟ್ಕಳದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಳ್ನಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಇದೇ ಗ್ರಾಮದ ಇಬ್ಬರು ನಿವಾಸಿಗಳು ತಮ್ಮ ಗೂಡ್ಸ್ ವಾಹನದಲ್ಲಿದ್ದ ಮ್ಯೂಸಿಕ್ ಸಿಸ್ಟಂ ನಲ್ಲಿ ಜೋರಾಗಿ ಹಾಡುಗಳನ್ನು ಪ್ಲೇ ಮಾಡಿಕೊಂಡು ಅಕ್ಕ ಪಕ್ಕದ ನಿವಾಸಿಗಳಿಗೆ ತೊಂದರೆಯನ್ನುAಟು ಮಾಡಿದ್ದರು.
ಸ್ಥಳೀಯರು ಈ ಬಗ್ಗೆ 112 ಸಹಾಯವಾಣಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ತಕ್ಷಣ ಸ್ಥಳಕ್ಕಾಗಮಿಸಿದ 112 ವಾಹನದ ಪೊಲೀಸರು ಇಬ್ಬರನ್ನೂ ತರಾಟೆಗೆ ತೆಗದುಕೊಂಡಿದ್ದಾರೆ. ಬಳಿಕ ಮುಂದೆ ಮತ್ತೆ ಹೀಗೆ ಮಾಡದಿರುವಂತೆ ಎಚ್ಚರಿಕೆಯನ್ನು ನೀಡಿ ಅಲ್ಲಿಂದ ಕಳುಹಿಸಿದ್ದಾರೆ.

Leave a Comment