ಯಲ್ಲಾಪುರ: ಕೇಂದ್ರ ನೆರೆ ಅಧ್ಯಯನ ತಂಡ ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದ ಕಳಚೆ,ಅರಬೈಲ್ ಘಟ್ಟ, ಗುಳ್ಳಾಪುರ ಸೇತುವೆ ಸೇರಿದಂತೆ ವಿವಿಧೆಡೆ ಸಂಚರಿಸಿ ಪರಿಶೀಲನೆ ನಡೆಸಿದರು.

ಕೇಂದ್ರಹೆದ್ದಾರಿಹಾಗೂರಸ್ತೆ ಸಾರಿಗೆ ಮಂತ್ರಾಲಯದಮುಖ್ಯಅಭಿಯoತರಎಸ್.ವಿ.ಜಯಕುಮಾರ ಹಾಗೂ ಗ್ರಾಮೀಣಅಭಿವೃದ್ಧಿ ಮಂತ್ರಾಲಯದಅಪರ ಕಾರ್ಯದರ್ಶಿ ಕೈಲಾಶ್ ಸಂಖ್ಲಾ ಹಾಗೂ ರಾಜ್ಯ ಸರ್ಕಾರದ ಲೈಸನಿಂಗ್ಅಧಿಕಾರಿ ಶ್ರೀನಿವಾಸ ರೆಡ್ಡಿ ಅವರನ್ನೊಳಗೊಂಡ ಅಧ್ಯಯನತಂಡ ತಾಲೂಕಿನ ಕಳಚೆ ಗ್ರಾಮ, ಅರಬೈಲ್ಘಟ್ಟ, ಗುಳ್ಳಾಪುರ ಸೇತುವೆ ಪ್ರದೇಶಕ್ಕೆ ಭೇಟಿ ನೀಡಿ ವಿಕ್ಷೀಸಿ ಮಾಹಿತಿ ಸಂಗ್ರಹಿಸಿದರು.
ಅತಿವೃಷ್ಟಿಯಿಂದ ಜಿಲ್ಲೆಯ ಹಳಿಯಾಳ, ಯಲ್ಲಾಪುರ, ಶಿರಸಿ, ದಾಂಡೇಲಿ, ಅಂಕೋಲಾ, ಕಾರವಾರ ತಾಲೂಕಿನಲ್ಲಿ ಹೆಚ್ಚಿನ ಹಾನಿಯಾಗಿದೆ. ಯಲ್ಲಾಪುರ ತಾಲ್ಲೂಕಿನಲ್ಲಿ ಹೆಚ್ಚು ಭೂಕುಸಿತವಾಗಿದ್ದು, ಅದರಲ್ಲಿ ಹೆಚ್ಚಿನ ಪ್ರದೇಶ ಅರಣ್ಯ ಪ್ರದೇಶವಾಗಿದೆ. ಹಾಗಾಗಿ ಜನವಸತಿಗೆ ಹೆಚ್ಚು ಪರಿಣಾಮ ಬೀರಲಿಲ್ಲ. ಆದರೂ ಮನೆಗಳು, ರಸ್ತೆ, ಹೆದ್ದಾರಿ, ಸೇತುವೆ, ಚಿಕ್ಕ ನೀರಾವರಿಗೆ ಹೆಚ್ಚು ಪರಿಣಾಮ ಬೀರಿದೆ ಎಂದು ಜಿಲ್ಲಾಧಿಕಾರಿಮುಲ್ಲೆöÊ ಮುಗಿನಲ್ ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯ್ತಿ ಸಿ.ಇ.ಒ ಪ್ರಿಯಾಂಗಾ ಎಂ., ಶಿರಸಿ ಉಪ ವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಜಿಲ್ಲೆ ಮತ್ತು ತಾಲ್ಲೂಕಿನ ಹಿರಿಯ ಅಧಿಕಾರಿಗಳಿದ್ದರು.

Leave a Comment